ಬೆಳಗಾವಿ, ಜು.23 : ಮಳೆಯ ಹಿನ್ನೆಲೆಯಲ್ಲಿ ಬೈಲಹೊಂಗಲ ತಾಲ್ಲೂಕಿನ ಶಾಲೆಗಳಿಗೂ ಸೋಮವಾರ ಜು.24 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಮಳೆಯ ವ್ಯಾಪಕವಾಗಿರುವುದರಿಂದ ಜಿಲ್ಲೆಯ ಕಿತ್ತೂರು, ಖಾನಾಪುರ, ಬೈಲಹೊಂಗಲ ಮತ್ತು ಬೆಳಗಾವಿ ನಗರ-ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಸೋಮವಾರ ರಜೆ ನೀಡಲಾಗಿದೆ.
ಖಾನಾಪುರ ತಾಲ್ಲೂಕಿನ ಪಿಯು ಕಾಲೇಜುಗಳಿಗೂ ರಜೆ:
ಖಾನಾಪುರ ತಾಲ್ಲೂಕಿನ ಶಾಲೆಗಳ ಜತೆಗೆ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೂ ರಜೆ ಘೋಷಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.