ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ಎನ್ಐಎ ದಾಳಿ ನಡೆದ ಮರುದಿನ ಕೇರಳ ಬಂದ್ ಗೆ ಪಿಎಫ್ಐ ಕರೆ ನೀಡಿದೆ. ಪಿಎಫ್ಐ ಕಾರ್ಯಕರ್ತರು ಕೆಎಸ್ಆರ್ಟಿಸಿ ಬಸ್ ಗಳಿಗೆ ಹಾನಿ ಮಾಡಿದ್ದಾರೆ.
ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 15 ರಾಜ್ಯಗಳಲ್ಲಿ ಪಿಎಫ್ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿ ವೇಳೆ 106 ನಾಯಕರು ಮತ್ತು ಕಾರ್ಯಕರ್ತರ ಬಂಧನವನ್ನು ವಿರೋಧಿಸಿ ಪಿಎಫ್ಐ ಬಂದ್ ಗೆ ಕರೆ ನೀಡಿದೆ,
ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇರಳ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪಿಎಫ್ಐ ಕಾರ್ಯಕರ್ತರು ಅಲುವಾ ಪ್ರದೇಶದಲ್ಲಿ ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ಕಲ್ಲು ತೂರಾಟ ನಡೆಸಿ ಕಿಟಕಿ ಗಾಜುಗಳನ್ನು ಒಡೆದಿದ್ದಾರೆ.
ಆಲುವಾದ ಕಂಬನಿಪಾಡಿ ಬಸ್ ಡಿಪೋದಲ್ಲಿ ಈ ಘಟನೆ ನಡೆದಿದೆ. ಕೋಝಿಕ್ಕೋಡ್ನಲ್ಲಿ ಕಳ್ಳತನದ ಘಟನೆಗಳು ವರದಿಯಾಗಿವೆ.