ಬೆಳಗಾವಿ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾದ ಘಟನೆ ತಾಲೂಕಿನ ಸುಳೇಭಾವಿ ಗ್ರಾಮದ ಶಿವಾಜಿ ಪ್ರತಿಮೆ ಎದುರು ನಡೆದಿದೆ.
ಸುಳೇಭಾವಿ ಗ್ರಾಮದ ರಣಧೀರ ಮುರಾರಿ(26) ಹಾಗೂ ಪ್ರಕಾಶ ನಿಂಗಪ್ಪ ಹುಂಕರಿ ಪಾಟೀಲ(24) ಎಂಬ ಯುವಕರನ್ನು ಹತ್ಯೆ ಮಾಡಲಾಗಿದೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಶಿವಾಜಿ ಪ್ರತಿಮೆ ಎದುರು ಕೊಲೆ ಮಾಡಲಾಗಿದೆ. ಕೊಲೆ ಯಾರು ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ.
ಮಾರೀಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಮಾರಿಹಾಳ ಇನ್ಸಪೆಕ್ಟರ್ ಬಸ್ಸಾಪೂರೆ ಸೇರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.