ಇಂಥವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೊದಲು ಅವರ ಪೂರ್ವಾಪರ ಅರಿಯಿರಿ; ಖರ್ಗೆ ಕಿಡಿ

A B Dharwadkar
ಇಂಥವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೊದಲು ಅವರ ಪೂರ್ವಾಪರ ಅರಿಯಿರಿ; ಖರ್ಗೆ ಕಿಡಿ

ಬೆಂಗಳೂರು, ೨೬:  ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಪುನಃ ಬಿಜೆಪಿ ಸೇರಿರುವ ಕುರಿತು ತೀವ್ರ ಮುಜುಗರಕ್ಕೊಳಗಾಗಿರುವ ಕಾಂಗ್ರೆಸ್ ಹೈಕಮಾಂಡ್,  ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ ಅವರನ್ನು ತರಾಟೆಗೆ ತೆಗೆದುಕೊಂಡಿದೆ. “ಬೇರೆ ಪಕ್ಷಗಳ ಇಂಥ ಮುಖಂಡರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಅವರ ಹಿನ್ನಲೆ ಅರಿತು ಅವರ ಕುರಿತು ಹೆಚ್ಚಿನ ಎಚ್ಚರಿಕೆ ವಹಿಸಬೇಕು” ಎಂದು ಸೂಚಿಸಿದೆ.

ಪಕ್ಷಕ್ಕೆ ಬಂದು ಕೇವಲ 9 ತಿಂಗಳಲ್ಲೇ ಪಕ್ಷ ತೊರೆದಿರುವ ಶೆಟ್ಟರ್ ಕುರಿತು ಪಕ್ಷಕ್ಕೆ ಎಚ್ಚರಿಕೆ ನೀಡಿರುವ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, “ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸುವಾಗ ಅವುಗಳ ಗುಣಮಟ್ಟ, ತೂಕ ಮೊದಲಾವುದಗಳನ್ನು ಸಮಗ್ರವಾಗಿ ಪರಿಶೀಲಿಸುವ ಹಾಗೆಯೇ ಪಕ್ಷಕ್ಕೆ ಸೇರಬಯಸುವವರ ಪೂರ್ವಾಪರ, ಅವರ ಗುಣ, ಚಾರಿತ್ರ್ಯ ಮತ್ತು ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಒಗ್ಗಿಕೊಳ್ಳುತ್ತಾರೆಯೇ ಎಂಬ ಅಂಶಗಳ ಪರಾಮರ್ಶೆ ನಡೆಸಿ ಅರ್ಹರಾಗಿದ್ದರೆ ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಶಿವಕುಮಾರ ಅವರಿಗೆ ಸಲಹೆ ನೀಡಿದರು.

75ನೇ ಗಣರಾಜ್ಯೋತ್ಸವದ ಅಂಗವಾಗಿ ಕೆಪಿಸಿಸಿ ಕಚೇರಿ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಮಾತಾಡಿದ ಖರ್ಗೆ ಅವರು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷ ತತ್ವ ಸಿದ್ಧಾಂತಗಳೊಂದಿಗೆ ರಾಜಿ ಮಾಡಿಕೊಳ್ಳುವಿದಿಲ್ಲ, ದೇಶದ ಐಕ್ಯತೆಗಾಗಿ ಇಂದಿರಾ ಗಾಂಧಿ, ರಾಜೀವ ಗಾಂಧಿಯವರು ತಮ್ಮ ಪ್ರಾಣಗಳನ್ನು ಬಲಿದಾನ ಮಾಡಿದ್ದನ್ನು ಯಾರೂ ಮರೆಯಬಾರದು, ಕಾಂಗ್ರೆಸ್ ಬಡವರು, ದಲಿತರು, ಕೃಷಿಕರು, ಶೋಷಿತರು ಮತ್ತು ಮಹಿಳೆಯರ ಬಗ್ಗೆ ಕಾಳಜಿ ಮತ್ತು ಗೌರವ ಹೊಂದಿರುವ ಪಕ್ಷ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.