ಬೆಂಗಳೂರು, ಫೆ. ೧೬ : ಬೆಳಗಾವಿ ನಗರದಲ್ಲಿ ವಾಹನ ದಟ್ಟನೆ ಮತ್ತು ಸಂಚಾರ ದಟ್ಟಣೆ ಪರಿಹರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 15ನೇ ಮುಂಗಡಪತ್ರದಲ್ಲಿ ಘೋಷಿಸಿದ್ದಾರೆ.
ಈ ಯೋಜನೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಕನಸ್ಸಿನ ಯೋಜನೆಯಾಗಿದ್ದು, ಇದರ ಅನುಷ್ಠಾನಕ್ಕಾಗಿ ಈಗಾಗಲೇ ಎರಡ್ಮೂರು ಸಭೆಗಳು ನಡೆದಿದ್ದವು. ಈ ಬಜೆಟ್ ನಲ್ಲಿಯೂ ಕಾಮಗಾರಿಗೆ ಅನುಮೋದನೆ ಸಿಕ್ಕಿದ್ದಕ್ಕೆ ಹಿಂದುಳಿದಿರುವ ಗಡಿ ಭಾಗದ ಜನರ ಹರ್ಷಕ್ಕೆ ಕಾರಣವಾಗಲಿದೆ.