ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವ ಮತ್ತಿಬ್ಬರನ್ನು ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 15ಕ್ಕೆ ಏರಿದೆ.
ಬಂಧಿತ ಆರೋಪಿಗಳು ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಹನಗಂಡಿ ನಿವಾಸಿ ಬೀರಪ್ಪ ಲಕ್ಷ್ಮಣ ಹನಗಂಡಿ (24) ಹಾಗೂ ಗೋಕಾಕ ತಾಲೂಕಿನ ಅರಭಾವಿಯ ನಿವಾಸಿ ಶಿವಾನಂದ ದುಂಡಪ್ಪ ಹಳ್ಳೂರ. ಎಂದು ಗುರುತಿಸಲಾಗಿದೆ.
ಬಂಧಿತರಿಂದ 6 ಮೊಬೈಲ್ ಫೋನ್, ಲ್ಯಾಪ್ಟಾಪ್ ಹಾಗೂ ಎಲೆಕ್ಟ್ರಾನಿಕ್ ಡಿವೈಸ್ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಬೀರಪ್ಪ ಹನಗಂಡಿ ಎಂಬಾತ ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಶ್ನೆ ಪತ್ರಿಕೆಗಳ ಮುದ್ರಣಕ್ಕಾಗಿ ಲ್ಯಾಪ್ಟಾಪ್ ಹಾಗೂ ಸ್ಮಾರ್ಟ ವಾಚ್ ಖರೀದಿಸಿ ಇನ್ನಿತರ ಆರೋಪಿಗಳಿಗೆ ತಂದು ಕೊಟ್ಟಿದ್ದನು.
ಇನ್ನು ಶಿವಾನಂದ ಹಳ್ಳೂರ ಸ್ಮಾರ್ಟ ವಾಚ್ಗಳಿಗೆ ಕನೆಕ್ಟ್ ಮಾಡುವ ಎಲೆಕ್ಟ್ರಾನಿಕ್ ಡಿವೈಸ್ ಸಮೇತ ಪರೀಕ್ಷೆಗೆ ಹಾಜರಾಗಿದ್ದ ಎನ್ನಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.