ಹುಬ್ಬಳ್ಳಿ : ರಾಜ್ಯದ ವಿಧಾನಮಂಡಲ ಚಳಿಗಾಲದ ಹತ್ತು ದಿನಗಳ ಅಧಿವೇಶನವನ್ನು ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ 19ರ ವರೆಗೆ ನಡೆಸಲು ಚರ್ಚಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಪ್ರಸ್ತಾಪಿತ ವೇಳಾಪಟ್ಟಿಯನ್ನು ಅವರು ಒಪ್ಪಿಕೊಂಡಿದ್ದಾರೆ. ಈ ವಿಚಾರವಾಗಿ ಮುಂದಿನ ವಾರ ಬೆಳಗಾವಿ ಜಿಲ್ಲಾಧಿಕಾರಿಯೊಂದಿಗೆ ಸಭೆ ನಡೆಸಲಾಗುವುದು” ಎಂದು ಹೇಳಿದ್ದಾರೆ.
“ಉತ್ತರ ಕರ್ನಾಟಕದ ಕೆಲವು ಚುನಾಯಿತ ಜನಪ್ರತಿನಿಧಿಗಳು ತಮ್ಮ ಪ್ರದೇಶದ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವುದಿಲ್ಲ. ಹೀಗಾಗಿ, ಉತ್ತರ ಕರ್ನಾಟಕದ ಕುರಿತು ಚರ್ಚೆ ನಡೆಸಲು ಎರಡು ದಿನಗಳನ್ನು ಮೀಸಲಿಡಲಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.

