This is the title of the web page

ಫ್ಲೈ ಓವರ್ ಮೇಲಿಂದ ಬಿದ್ದ ಬೆಂಗಳೂರು-ಗೋಕಾಕ ಬಸ್; 2 ಸಾವು, 15 ಜನರಿಗೆ ಗಾಯ

ಹಾವೇರಿ, 12- ಬೆಂಗಳೂರಿನಿಂದ ಬೆಳಗಾವಿ ಜಿಲ್ಲೆಯ ಗೋಕಾಕ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್ಸೊಂದು ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಇಬ್ಬರು ಸಾವಿಗೀಡಾಗಿದ್ದು 15 ಜನ ಗಾಯಗೊಂಡಿದ್ದಾರೆ.

ಹಾವೇರಿ ಜಿಲ್ಲೆಯ ದೇವಗಿರಿ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫ್ಲೈ ಓವರ್ ಮೇಲಿನಿಂದ ಸುಮಾರು 50 ಅಡಿ ಕೆಳಗೆ ಸರ್ವಿಸ್ ರಸ್ತೆಗೆ ಬಸ್ ಬಿತ್ತು. ಚಾಲಕ ಹಾಗೂ ಓರ್ವ ಪ್ರಯಾಣಿಕ ಸ್ಥಳದಲ್ಲೇ ಅಸು ನೀಗಿದರೆ ಇತರ 15 ಪ್ರಯಾಣಿಕರು ಗಾಯಗೊಂಡರು. ಶನಿವಾರ ಮಧ್ಯರಾತ್ರಿ ಈ ದುರ್ಘಟನೆ ಸಂಭವಿಸಿದೆ.

ಓವರ್ ಟೇಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು ಬಸ್ಸಿನಲ್ಲಿ 25 ಜನ ಪ್ರಯಾಣಿಸುತ್ತಿದ್ದರು. ಗಾಯಗೊಂಡಿರುವ ಪ್ರಯಾಣಿಕರನ್ನು ಹಾವೇರಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

You might also like
Leave a comment