Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

National News

ವಿಮಾನ ನಿಲ್ದಾಣದಲ್ಲಿ ಮಗುವಿಗೆ ಜನ್ಮ ನೀಡಿದ ಹುಬ್ಬಳ್ಳಿಯ ಮಹಿಳೆ 


ಹೊಸದಿಲ್ಲಿ: ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರು ದೆಹಲಿಯ ಇಂದಿರಾ ಗಾಂಧಿ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.

ಟರ್ಮಿನಲ್​ – 3 ರಲ್ಲಿ ಗರ್ಭಿಣಿಗೆ ನೋವು ಕಾಣಿಸಿಕೊಂಡು ಅಲ್ಲಿಯೇ ಜನ್ಮ ಕೊಟ್ಟಿದ್ದಾರೆ. ವಿಮಾನ ನಿಲ್ದಾಣದಲ್ಲೇ ಇದ್ದ ತುರ್ತು ಚಿಕಿತ್ಸಾ ಕೇಂದ್ರಕ್ಕೆ ತಾಯಿ ಮಗುವನ್ನು ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು  ವೈದ್ಯರು ತಿಳಿಸಿದ್ದಾರೆ.

ಟರ್ಮಿನಲ್​ 3 ರಲ್ಲಿ ಕರ್ನಾಟಕ ಮೂಲದ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. ಕಿರಿಯ ಪ್ರಯಾಣಿಕರಿಗೆ ಸ್ವಾಗತ ಕೋರಲಾಗುವುದು. ನಿಲ್ದಾಣದಲ್ಲಿ ಮಗು ಜನಿಸಿರುವುದು ಇದೇ ಮೊದಲು ಎಂದು ವಿಮಾನ ನಿಲ್ದಾಣದ ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.

ವಿಮಾನ ನಿಲ್ದಾಣದಲ್ಲಿ ಮೆದಾಂತ್​ ಎಂಬ ತುರ್ತು ಚಿಕಿತ್ಸಾ ಘಟಕವಿದ್ದು, ಫೋರ್ಟಿಸ್ ಗ್ರುಪ್​ನಿಂದ ಆಸ್ಪತ್ರೆಗಳಲ್ಲಿ ಸಿಗುವ ವೈದ್ಯಕೀಯ ಸೌಲಭ್ಯವನ್ನು ಕಲ್ಪಿಸಲಾಗಿದೆ.


A B Dharwadkar
the authorA B Dharwadkar

Leave a Reply