ಬೆಳಗಾವಿ, ೨೧: ಬಿಜೆಪಿಯ ಹಿರಿಯ ನಾಯಕರು ಹಾಗೂ ವರಿಷ್ಠರ ವಿರುದ್ಧ ನಗರದಲ್ಲಿ ಭಿತ್ತಿಪತ್ರ ಹಾಕಿರುವುದನ್ನು ಖಂಡಿಸಿ, ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ (ಮಹಾನಗರ ಜಿಲ್ಲೆ) ಜಿಲ್ಲಾಧ್ಯಕ್ಷರಾದ ಶ್ರೀಮತಿ ಗೀತಾ ಸುತಾರ್ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಪಕ್ಷದ ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.