This is the title of the web page

ಲಖನ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು; ಬಿಜೆಪಿಗೆ ಮುಖಭಂಗ

ಬೆಳಗಾವಿ, 14- ಅತ್ಯಂತ ತುರುಸಿನ ಎನ್ನಲಾದ ಬೆಳಗಾವಿ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಜಯಗಳಿಸಿದ್ದಾರೆ.

ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಸತೀಶ ಜಾರಕಿಹೊಳಿ ನೇತೃತ್ವದ ಫಲವಾಗಿ ಕಾಂಗ್ರೆಸ್ ನ ಚನ್ನರಾಜ ಹಟ್ಟಿಹೊಳಿ ಅದ್ಭುತ ಜಯದೊಂದಿಗೆ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ.

ಎರಡನೇ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಜಯಸಾಧಿಸಿ ಮಹಾಂತೇಶ ಕವಟಗಿಮಠ ಸೋಲು ಅನುಭವಿಸಿದ್ದರಿಂದ ಬಿಜೆಪಿಗೆ ಭಾರೀ ಮುಖಭಂಗವಾದಂತಾಗಿದೆ.

You might also like
Leave a comment