ಬೆಳಗಾವಿ : ರಾಜ್ಯ ಸರಕಾರದ ಬಜೆಟ್ ಹಾಗೂ 18 ಬಿಜೆಪಿ ಶಾಸಕರ ಅಮಾನತ್ತು ಖಂಡಿಸಿ ಸೋಮವಾರ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಸುಮಾರು 8ಕ್ಕೂ ಅಧಿಕಾರ ಕಾರ್ಯಕರ್ತರನ್ನು ಮಾರ್ಕೇಟ್ ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ನಡೆದಿದೆ.
ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಾಕ್ಕಿದ್ದ ಸರಕಾರದ ಗ್ಯಾರಂಟಿ ಯೋಜನೆಯ ಪೋಸ್ಟರ್ ಹರಿಯಲು ಯತ್ನಿಸಿದ್ದ ಪುರುಷರನ್ನು ತಡೆದರು. ಆಗ ಪುರುಷರು ಮಹಿಳೆಯರನ್ನು ಮುಂದೆ ಬಿಟ್ಟು ಪೋಸ್ಟರ್ ಹರಿಯಲು ಸೂಚಿಸಿದರು. ಆದರೆ ಕಡಿಮೆ ಸಂಖ್ಯೆಯಲ್ಲಿದ್ದ ಮಹಿಳಾ ಪೊಲೀಸರು ಬಿಜೆಪಿ ಮಹಿಳೆಯರನ್ನು ತಡೆಯಲು ವಿಫಲವಾದರು. ಸಿದ್ದರಾಮಯ್ಯ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಭಾವಚಿತ್ರವಿದ್ದ ಪೋಸ್ಟರ್ ಹರಿದರು.
ಪ್ರತಿಭಟನೆ ನಡೆಸುತ್ತಿದ್ದ ಸುಮಾರು 10 ಪುರುಷ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಜೀಪನಲ್ಲಿ ಕರೆದುಕೊಂಡು ಹೋಗುತ್ತಿರುವಾಗ ಜೀಪ್ ಎದುರು ಕುಳಿತು ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರಕಾರ ಮಂಡಿಸಿದ ಬಜೆಟ್ ಹಿಂದು ವಿರೋಧಿ ಬಜೆಟ್ ಹಾಗೂ ದಲಿತರ ಅನುದಾನವನ್ನು ತನ್ನ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಜಿಲ್ಲಾಧಿಕಾರಿ ಕಚೇರಿ ಎದುರು ಅಳವಡಿಸಲಾದ ಗ್ಯಾರಂಟಿ ಯೋಜನೆಯ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದ ವೇಳೆ ಪೊಲೀಸರು ತಡೆಯಲೆತ್ನಿಸಿದಾಗ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
082e131e-5168-4e05-a384-c95fb7208269 e944398d-af88-4e2f-a94b-7aad152fbb21
ಇದೇ ಸಂದರ್ಭದಲ್ಲಿ ಪೊಲೀಸರಿಗೆ ತಳ್ಳಾಟ ನೂಕಾಟ ನಡೆಸಿದ ಸುಮಾರು 8 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ಮಾರ್ಕೆಟ್ ಪೊಲೀಸರು ವಶಕ್ಕೆ ಪಡೆದುಕೊಂಡರು ಎಂದು ವರದಿಯಾಗಿದೆ.