This is the title of the web page

ಸೋಮವಾರ ತಾಯ್ನಾಡಿಗೆ ಬರಲಿರುವ ನವೀನ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನ

ಹಾವೇರಿ, 19- ರಶಿಯಾ-ಉಕ್ರೇನ್ ಯುದ್ಧದಲ್ಲಿ ಇತ್ತೀಚೆಗೆ ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ ಶೇಖರಪ್ಪ ಗ್ಯಾನಗೌಡರ ಅವರ ಮೃತದೇಹವನ್ನು ವೈದ್ಯಕೀಯ ಕಾಲೇಜಿಗೆ ಅಧ್ಯಯನಕ್ಕೆ ದಾನ ಮಾಡಲಾಗುವುದು ಎಂದು ಮೃತ ಯುವಕನ ತಂದೆ ಶೇಖರಪ್ಪ ಹೇಳಿದ್ದಾರೆ.

ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮ ಮಗನಿಗೆ ವೈದ್ಯಕೀಯ ಜನರ ಸೇವೆ ಮಾಡಬೇಕೆಂಬ ಆಸೆಯಿತ್ತು, ಅವನ ಆಸೆ ಈಡೇರಲಿಲ್ಲ, ಅವನ ಮೃತದೇಹದಿಂದ ವೈದ್ಯಕೀಯ ಕೋರ್ಸ ಕಲಿಯುವ ಮಕ್ಕಳಿಗಾದರೂ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಾಲೇಜಿಗೆ ನೀಡಲು ನಾವೆಲ್ಲರೂ ಸೇರಿ ನಿರ್ಧಾರ ಮಾಡಿದ್ದೇವೆ ಎಂದರು.

ನವೀನ ಮೃತದೇಹವನ್ನು ದಾವಣಗೆರೆಯ ಎಸ್ಎಸ್ ಮೆಡಿಕಲ್ ಕಾಲೇಜಿಗೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ಸಹಾಯವಾಗಲು ನೀಡುವುದಾಗಿ ಅವರು ತಿಳಿಸಿದರು.

ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ ಮೃತದೇಹ ಸೋಮವಾರ ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿಗೆ ಬರಲಿದೆ. ಸೋಮವಾರ ಬೆಳಗಿನ ಜಾವ ಮೂರು ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಮೃತದೇಹ ಬರಲಿದ್ದು, ಸಂಜೆ ಹೊತ್ತಿಗೆ ಹುಟ್ಟೂರಿಗೆ ಕಳುಹಿಸಿ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಚಳಗೇರಿಯಿಂದ ವೈದ್ಯಕೀಯ ವ್ಯಾಸಂಗಕ್ಕಾಗಿ ನವೀನ‌ ಉಕ್ರೇನ್‌ಗೆ ತೆರಳಿದ್ದರು. ಈ ಯುವಕ ಮೃತಪಟ್ಟು 21 ದಿನಗಳಾದ ನಂತರ ಮೃತದೇಹ ತಾಯ್ನಾಡಿಗೆ ಬರುತ್ತಿದೆ.

You might also like
Leave a comment