ರಾಯಚೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಎಸ್ಎಸ್ ಕೈಗೊಂಬೆಯಾಗಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ರಾಯಚೂರಿನಲ್ಲಿ ನಡೆದ ಭಾರತ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರೆಲ್ಲರೂ ಮಾತೆತ್ತಿದರೆ ನನ್ನನ್ನೇ ಬೈಯುತ್ತಾರೆ. ಬಿಜೆಪಿ ನಾಯಕರಿಗೆ ನನ್ನನ್ನು ಕಂಡರೆ ಎಷ್ಟು ಭಯ ಇದೆ ನೋಡಿ. ಯಾಕೆಂದರೆ ಆರ್ಎಸ್ಎಸ್ ಮತ್ತು ಮೋದಿ ಬಗ್ಗೆ ಮಾತನಾಡೋದು ನಾನೊಬ್ಬನೇ ಎಂದು ಹೇಳಿದರು.
ಸಂಸದ ಅನಂತಕುಮಾರ ಹೆಗಡೆಗೆ ಗ್ರಾಮ ಪಂಚಾಯಿತಿ ಸದಸ್ಯನಾಗಲೂ ಯೋಗ್ಯತೆ ಇಲ್ಲ. ಅಂಬೇಡ್ಕರ ಬರೆದ ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದಾನೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ ಶಾ ಮಾತು ಕೇಳಿ ಈ ಹೇಳಿಕೆ ನೀಡಿದ್ದಾನೆ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.