This is the title of the web page

ಕಟ್ಟಡ ಕಾರ್ಮಿಕರಿಗೆ ಸಿಗಲಿದೆ ಉಚಿತ ಬಸ್ ಪಾಸ್

ಬೆಂಗಳೂರು, 12- ನೋಂದಾಯಿತ ಕಟ್ಟಡ ಕಾರ್ಮಿಕರು ಕೆಲಸದ ಸ್ಥಳಗಳಿಗೆ ತೆರಳಲು ಅನುಕೂಲವಾಗುವಂತೆ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಬಸ್ ಪಾಸ್ ವಿತರಿಸಲಾಗಿದೆ.

ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದ್ದು, ಶೀಘ್ರದಲ್ಲೇ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಕಾರ್ಮಿಕ ಇಲಾಖೆ ಮತ್ತು ಕೆಎಸ್‌ಆರ್ಟಿಸಿ ನಡುವೆ ಯೋಜನೆಯ ವ್ಯಾಪ್ತಿ, ಉಚಿತ ಪಾಸ್ ವಿತರಣೆ, ದೂರದ ಮಿತಿ ಮೊದಲಾದವುಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು, ಶೀಘ್ರವೇ ರಾಜ್ಯದ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದರು.

You might also like
Leave a comment