This is the title of the web page

ಕಾಂಗ್ರೆಸ್ ಹೈಕಮಾಂಡ್ ನಿಂದ ಸಿದ್ದರಾಮಯ್ಯಗೆ ಬುಲಾವ್ 

 

ಬೆಂಗಳೂರು :  ಕಾಂಗ್ರೆಸ್ ಹೈಕಮಾಂಡ್ ದೇಶದ ಎಲ್ಲಾ ಕಾಂಗ್ರೆಸ್ ಶಾಸಕರು, ಎಂಎಲ್ ಸಿಗಳಿಗೆ ದೆಹಲಿಗೆ ಬರುವಂತೆ ಕರೆ ನೀಡಿದೆ.

ಹೀಗಾಗಿ ಇಂದು ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು, ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್ ನ ಎಲ್ಲಾ ಎಂಎಲ್ ಸಿಗಳೂ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ದೆಹಲಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ತೆರಳಿದ್ದು, ಇಂದು ಸಂಜೆಯೊಳಗೆ ಎಲ್ಲಾ ಕಾಂಗ್ರೆಸ್ ನಾಯಕರು ದೆಹಲಿಗೆ ಬರುವಂತೆ ಸೂಚನೆ ನೀಡಿದೆ.

ನಾಳೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ರಾಜ್ಯ ಕಾಂಗ್ರೆಸ್ ನ ಎಲ್ಲರೂ ದೆಹಲಿಗೆ ಆಗಮಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.

You might also like
Leave a comment