Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

National News

ದೀಪಾವಳಿಯಲ್ಲಿ ಪಟಾಕಿ ಸಿಡಿಸಿದರೆ ಜೈಲು ಶಿಕ್ಷೆ


ಹೊಸದಿಲ್ಲಿ : ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಗಂಭೀರ ಸ್ಥಿತಿಗೆ ತಲುಪಿರುವ ಕಾರಣ ಈ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧ ಮಾಡಿ ದೆಹಲಿ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಒಂದು ವೇಳೆ ಪಟಾಕಿ ಸಿಡಿಸಿದರೆ 6 ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ ರಾಯ್ ಬುಧವಾರ ಹೇಳಿದ್ದಾರೆ.

ಈ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜಧಾನಿಯಲ್ಲಿ ಪಟಾಕಿ ಉತ್ಪಾದನೆ, ಶೇಖರಣೆ ಮತ್ತು ಮಾರಾಟಕ್ಕೆ 5,000 ರೂ.ವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ನಗರಾಡಳಿತವು ದೀಪಾವಳಿ ಸೇರಿದಂತೆ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ಜನವರಿ 1 ರವರೆಗೆ ಸಂಪೂರ್ಣ ನಿಷೇಧಿಸಿತ್ತು, ಇದು ಕಳೆದ ಎರಡು ವರ್ಷಗಳಿಂದ ಅನುಸರಿಸುತ್ತಿರುವ ಪದ್ಧತಿಯಾಗಿದೆ.

ದೀಪ ಬೆಳಗಿರಿ, ಪಟಾಕಿ ಅಲ್ಲ ಎಂಬ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಅಕ್ಟೋಬರ 21 ರಂದು ಪ್ರಾರಂಭಿಸಲಾಗುವುದು ಎಂದು ರಾಯ್ ಹೇಳಿದರು. ದೆಹಲಿ ಸರ್ಕಾರವು ಶುಕ್ರವಾರ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ 51,000 ದೀಪಗಳನ್ನು ಬೆಳಗಿಸಲಿದೆ.

ದೆಹಲಿಯಲ್ಲಿ ಪಟಾಕಿಗಳನ್ನು ಖರೀದಿಸುವುದು ಮತ್ತು ಸಿಡಿಸುವುದು 200 ರೂಪಾಯಿ ದಂಡ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಆರು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ನಿಷೇಧಾಜ್ಞೆ ಜಾರಿಗೊಳಿಸಲು 408 ತಂಡಗಳನ್ನು ರಚಿಸಲಾಗಿದೆ ಎಂದು ಸಚಿವರು ಹೇಳಿದರು. ದೆಹಲಿ ಪೊಲೀಸರು ಸಹಾಯಕ ಪೊಲೀಸ್ ಆಯುಕ್ತರ ಅಡಿಯಲ್ಲಿ 210 ತಂಡಗಳನ್ನು ರಚಿಸಿದ್ದರೆ, ಕಂದಾಯ ಇಲಾಖೆ 165 ತಂಡಗಳನ್ನು ಸ್ಥಾಪಿಸಿದೆ ಮತ್ತು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯು 33 ತಂಡಗಳನ್ನು ರಚಿಸಿದೆ.

ಅಕ್ಟೋಬರ 16 ರವರೆಗೆ 188 ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಮತ್ತು 2,917 ಕೆಜಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಚಿವ ರಾಯ್ ಹೇಳಿದರು.


A B Dharwadkar
the authorA B Dharwadkar

Leave a Reply