ಬೆಂಗಳೂರು, ಫೆ. 16: ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ ಸೇರಿದಂತೆ ರಾಜ್ಯದ 11 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ಈ ವರ್ಷದ ಮುಂಗಡಪತ್ರದ ಭಾಷಣದಲ್ಲಿ ಅವರು ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ, ಬೆಂಗಳೂರು, ಬಳ್ಳಾರಿ, ದಾವಣಗೆರೆ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು ಮಹಾನಗರ ವ್ಯಾಪ್ತಿಗಳಲ್ಲಿ ಇನ್ನೂ ಮುಂದೆ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ ಎಂದು ತಿಳಿಸಿದರು.
ಬೆಂಗಳೂರು ಹಾಗೂ ಇತರ 10 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು, ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯ ರಾತ್ರಿ 1 ಗಂಟೆಯವರೆಗೆ ವಿಸ್ತರಿಸುವುದಾಗಿ ಹೇಳಿದ್ದಾರೆ.