ಬೆಂಗಳೂರು: ವಿದ್ಯಾರ್ಥಿ ವೇತನ, ಉಚಿತ ಬಸ್ ಪಾಸ್, ಸಾರಿಗೆ ವ್ಯವಸ್ಥೆ, ಫಲಿತಾಂಶ ವಿಳಂಬ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 17 ರಂದು ಶಾಲಾ-ಕಾಲೇಜು ಬಂದ್ ಗೆ ಕರೆ ನೀಡಲಾಗಿದೆ.
ಕಾಂಗ್ರೆಸ್ ವಿದ್ಯಾರ್ಥಿ ಘಟಕ ಎನ್.ಎಸ್.ಯು.ಐ. ಕಾಲೇಜು ಬಂದ್ ಗೆ ಕರೆ ನೀಡಿದೆ. ಎನ್.ಎಸ್.ಯು.ಐ. ಅಧ್ಯಕ್ಷ ಕೀರ್ತಿ ಗಣೇಶ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಈ ಹಿಂದೆ ವಿವಿಧ ವಿಶ್ವವಿದ್ಯಾಲಯ ಪರೀಕ್ಷೆಗಳ ಫಲಿತಾಂಶ ನಿಗದಿತ ಅವಧಿಗಿಂತ ಕೆಲವು ದಿನ ಮೊದಲು ಅಥವಾ ತಡವಾಗಿ ಬರುತ್ತಿದ್ದವು. ಈಗ ವರ್ಷವೇ ಕಳೆದರೂ ಫಲಿತಾಂಶ ಪ್ರಕಟಿಸಿಲ್ಲ. ಒಬ್ಬರ ಮೇಲೆ ಒಬ್ಬರು ಆರೋಪಿಸುತ್ತಿದ್ದಾರೆ. ಎನ್ಇಪಿ ಬಗ್ಗೆ ಯಾರಿಗೂ ಸರಿಯಾದ ಮಾಹಿತಿ ಇಲ್ಲವಾಗಿದೆ ಎಂದು ದೂರಿದ್ದಾರೆ.
ಸರ್ಕಾರಿ ಕಾಲೇಜ್ ಗಳಲ್ಲೂ ಶುಲ್ಕ ಏರಿಕೆ ಮಾಡಲಾಗುತ್ತಿದೆ. ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ಸಾರಿಗೆ ವ್ಯವಸ್ಥೆ ಇಲ್ಲವಾಗಿದೆ ಎಂದು ದೂರಿದ ಅವರು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಸೆಂಬರ 17ರಂದು ಶಾಲಾ, ಕಾಲೇಜು ಬಂದ್ ಗೆ ಕರೆ ನೀಡಲಾಗಿದೆ ಎಂದು ಹೇಳಿದ್ದಾರೆ.