ಕುಂದಾಪುರ : ಮಂಗಳವಾರದಿಂದ ಹೊಸಂಗಡಿ, ಸಿದ್ದಾಪುರ ಭಾಗದಲ್ಲಿ ಕಾಡಾನೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ದಿನಾಂಕ 04/06/2025 ರಂದು ನಡೆಯಬೇಕಿದ್ದ ಸಿದ್ದಾಪುರ ಸಂತೆಯನ್ನು ರದ್ದುಪಡಿಸಲಾಗಿದೆ.
ಸಿದ್ದಾಪುರ, ಹೊಸಂಗಡಿ ಮತ್ತು ಕಮಲಶಿಲೆ ಗ್ರಾಮಗಳ ವ್ಯಾಪ್ತಿಯ ಎಲ್ಲ ಅಂಗನವಾಡಿ ಕೇಂದ್ರಗಳು, ಶಾಲೆಗಳು ಮತ್ತು ಪ್ರೌಢಶಾಲಾ ವಿಭಾಗಕ್ಕೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.
ಕಳೆದ ಎರಡು ದಿನಗಳಿಂದ ಆನೆ ಈ ಪ್ರದೇಶದಲ್ಲಿ ಓಡಾಡುತ್ತಿದ್ದು ಸಾಕಿದ ಆನೆಗಳನ್ನು ತರಿಸಿ ಸೆರೆ ಹಿಡಿಯುವ ಪ್ರಯತ್ನ ನಡೆಸಲಾಗುತ್ತಿದೆ.
ಸಾರ್ವಜನಿಕರು ಭಯಭೀತರಾಗದೇ ಜಾಗರೂಕತೆಯಿಂದ ಓಡಾಡಬೇಕು ಎಂದು ತಾಲೂಕು ಆಡಳಿತ ಪ್ರಕಟಣೆ ನೀಡಿದೆ.