Live Stream

November 2022
W T F S S M T
 1
2345678
9101112131415
16171819202122
23242526272829
30  

| Latest Version 8.2.9 |

Local News

ಅಂಕಲಗಿ ಬಳಿ ಹಳ್ಳಕ್ಕೆ ಬಿದ್ದ ಕಾರು


 ಗೋಕಾಕ: ರಾಜ್ಯಾದ್ಯಂತ ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೀಡಾಗುತ್ತಿದ್ದು, ಈ ನಡುವೆ ಚಲಿಸುತ್ತಿದ್ದ ಕಾರು ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ನಡೆದಿದೆ.

ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಕಾರಿನಲ್ಲಿದ್ದ ದಂಪತಿ ಸಿದ್ದಪ್ಪ ಹಾಗೂ ಸೀಮಾ ಕೊಣ್ಣೂರ ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ದಂಪತಿ ಬೆಳಗಾವಿಯಿಂದ ಧುಪದಾಳಕ್ಕೆ ಕೆಲಸದ ನಿಮಿತ್ತ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಸದ್ಯ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದು, ಕಾರನ್ನು ಕ್ರೇನ್ ಮೂಲಕ ಮೇಲಕೆತ್ತಲಾಗಿದೆ.

ಅಂಕಲಗಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Leave a Reply