This is the title of the web page

ಸಿದ್ದರಾಮಯ್ಯ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲು 

 

ಬೆಂಗಳೂರು, ೧೭- ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ಹೈಗ್ರೌಂಡ್ಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಲವಾದಿ ನಾರಾಯಣಸ್ವಾಮಿ, ಸಿದ್ದರಾಮಯ್ಯ ಬಗ್ಗೆ ಅಪಾರ ಗೌರವ ಇದೆ. ಆದರೆ ನನ್ನನ್ನು ನಿಂದಿಸುವ ಭರದಲ್ಲಿ ಅವರು ನನ್ನ ಜಾತಿಯನ್ನು ನಿಂದಿಸಿದ್ದಾರೆ.

ಸರ್ಕಾರದ ವಿಚಾರವಾಗಿ ಬೇಕಿದ್ದರೆ ವಾಗ್ದಾಳಿ ನಡೆಸಲಿ, ಆದರೆ ಜಾತಿ ವಿಷಯವಾಗಿ ನಿಂದಿಸಿದ್ದು ಅಪಮಾನ. ಹೀಗಾಗಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದೇನೆ ಎಂದರು.

ಸಿದ್ದರಾಮಯ್ಯರನ್ನು ತಕ್ಷಣ ಬಂಧಿಸಬೇಕು. ಒಂದು ವೇಳೆ ಬಂಧಿಸಲು ವಿಳಂಬ ಮಾಡಿದರೆ ಪ್ರತಿಭಟನೆ ನಡೆಸುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.

You might also like
Leave a comment