ಹೊಸದಿಲ್ಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್ಐ ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.
ದೇಶದ 15 ರಾಜ್ಯಗಳಲ್ಲಿ ಪಿಎಫ್ ಐ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿ ನೂರಾರು ಕಾರ್ಯಕರ್ತರನ್ನು ಬಂಧಿಸಿದ್ದು, ಈ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ ಬಗ್ಗೆ ಸಂಗ್ರಹಿಸಿರುವ ಸಾಕ್ಷ್ಯಗಳ ಆಧಾರದ ಮೇಲೆ ಪಿಎಫ್ ಐ ಅನ್ನು ದೇಶದಲ್ಲಿ ಐದು ವರ್ಷಗಳ ಕಾಲ ನಿಷೇಧಿಸಲಾಗಿದೆ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.