Please assign a menu to the primary menu location under menu

State

ರಾಜ್ಯದ ಇಬ್ಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 


ಕಾರವಾರ : 2022ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಕರ್ನಾಟಕದ ಇಬ್ಬರಿಗೆ ಪ್ರಶಸ್ತಿ ದೊರೆತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೨ರ ಬಾಲ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ ಜೈಮನ್ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೨ ರ ಯುವ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಿದ್ದಾಪುರ ತಾಲೂಕಿನ ತಮ್ಮಣ್ಣ ಬೀಗಾರ ಅವರ ಬಾವಲಿ ಗುಹೆ ಎನ್ನುವ ಮಕ್ಕಳ ಕಾದಂಬರಿಗಾಗಿ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೨ರ ಬಾಲ ಸಾಹಿತ್ಯ ಪ್ರಶಸ್ತಿಗೆ ಭಾಜನವಾಗಿದ್ದಾರೆ. ಪ್ರಶಸ್ತಿಯು 50,000 ನಗದು ಮತ್ತು ಸನ್ಮಾನ ಹೊಂದಿದೆ.

ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿಯ ದಾದಾಪೀರ ಜೈಮನ್ ಅವರ ನೀಲಕುರಂಜಿ ಕಥಾ ಸಂಕಲನಕ್ಕೆ ಕೇಂದ್ರ ಯುವ ಸಾಹಿತ್ಯ ಪ್ರಶಸ್ತಿ ದೊರೆತಿದೆ. ಪ್ರಶಸ್ತಿಗಳನ್ನು ಡಿಸೆಂಬರ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ.

ಪ್ರಶಸ್ತಿಗೆ ಆಯ್ಕೆಯಾದವರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ ಚಂದ್ರಶೇಖರ ಕಂಬಾರ ಅಭಿನಂದಿಸಿದ್ದಾರೆ. ಬಾಲ ಸಾಹಿತ್ಯ ಪ್ರಶಸ್ತಿಗೆ ಶಿವಲಿಂಗಪ್ಪ ಹಂದಿಹಾಳು , ಲೋಹಿತ ನಾಯ್ಕರ ಹಾಗೂ ಎಂ ಎಚ್ ನಾಗರಾಜ ಅವರು ಜ್ಯೂರಿಗಳಾಗಿದ್ದರು.

ಯುವ ಸಾಹಿತ್ಯ ಪ್ರಶಸ್ತಿಯ ಜ್ಯೂರಿಗಳಾಗಿ ಉಷಾ, ನಗರಗೆರೆ ರಮೇಶ ಹಾಗೂ ಎನ್ ಎಸ್ ಗುಂಡೂರ ಕೆಲಸ ನಿರ್ವಹಿಸಿದ್ದರು. ಪುಸ್ತಕ ಆಯ್ಕೆ ಪ್ರಕ್ರಿಯೆಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕ ಡಾ. ಸರಜೂ ಕಾಟ್ಕರ ಅವರ ಉಸ್ತುವಾರಿಯಲ್ಲಿ ನಡೆಯಿತು.


Samadarshi News

Leave a Reply