ಹೊಸದಿಲ್ಲಿ: ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಧನಂಜಯ ಯಶವಂತ ಚಂದ್ರಚೂಡ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಚಂದ್ರಚೂಡ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಡಿ. ವೈ ಚಂದ್ರಚೂಡ ಅವರು 2024ರ ನವೆಂಬರ್ 10ರ ವರೆಗೆ ನ್ಯಾಯಮೂರ್ತಿ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರದಲ್ಲಿ ಇರಲಿದ್ದಾರೆ.
2016 ಮೇ 13ರಂದು ಸುಪ್ರೀಮ ಕೋರ್ಟನ ನ್ಯಾಯಾಧೀಶರಾಗಿ ಚಂದ್ರಚೂಡ ನೇಮಕವಾಗಿದ್ದರು. ಅದಕ್ಕೂ ಹಿಂದೆ ಅಲಹಾಬಾದ ಹೈಕೋರ್ಟನ ಮುಖ್ಯ ನ್ಯಾಯಮೂರ್ತಿಯಾಗಿ, ಬಾಂಬೆ ಹೈಕೋರ್ಟನ ನ್ಯಾಯಮೂರ್ತಿಯಾಗಿ ಅಧಿಕಾರದಲ್ಲಿದ್ದರು.
ದೇಶದ 16ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಯಶವಂತ ವಿಷ್ಣು ಚಂದ್ರಚೂಡ ಅವರ ಪುತ್ರರಾಗಿರುವ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಅವರು, 44 ವರ್ಷಗಳ ಬಳಿಕ ತಂದೆ ಅಲಂಕರಿಸಿದ್ದ ಸ್ಥಾನವನ್ನು ವಹಿಸಿಕೊಂಡಿದ್ದಾರೆ.