This is the title of the web page

ಹಿಮಾಲಯದ ಯೋಗಿಗೆ ಗುಪ್ತ ಮಾಹಿತಿ ಹಂಚಿಕೆ ಪ್ರಕರಣ; ಚಿತ್ರಾ ರಾಮಕೃಷ್ಣ ಬಂಧನ

ನವದೆಹಲಿ, 7: ಭಾರತದ ಅತಿದೊಡ್ಡ ಶೇರು ವಿನಿಮಯ ಕೇಂದ್ರ‌ ಎನ್‌ಎಸ್‌ಇ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಚಿತ್ರಾ ರಾಮಕೃಷ್ಣ ಅವರನ್ನು ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಬಂಧಿಸಿದೆ.

ಮಾಜಿ ಎನ್ ಎಸ್ ಇ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಅವರು ಹಿಮಾಲಯದ ಓರ್ವ ಬಾಬಾಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂಬ ಪ್ರಕರಣ ಭಾರಿ ಕುತೂಹಲ ಕೆರಳಿಸಿತ್ತು.

ಫೆಬ್ರವರಿ 11 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಷೇರು ನಿಯಂತ್ರಕ ಸೆಬಿ ಆದೇಶ ಹೊರಡಿಸಿ, ಚಿತ್ರಾ ರಾಮಕೃಷ್ಣ ಅವರು ನೇಮಕಾತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 3 ಕೋಟಿ ರೂಪಾಯಿ ದಂಡವನ್ನು ವಿಧಿಸಿತ್ತು.

ಭಾರತದ ಶೇರು ಮಾರುಕಟ್ಟೆ‌ (ಎನ್‌ಎಸ್‌ಇ) ಮಾಜಿ ಮುಖ್ಯಸ್ಥೆಯಾದ ಚಿತ್ರಾ ರಾಮಕೃಷ್ಣ ಹಿಮಾಲಯದ ಓರ್ವ ಯೋಗಿಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆ ಯೋಗಿಯ ಸಲಹೆಯನ್ನು ಪಡೆದು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದು ಮಾರುಕಟ್ಟೆ ನಿಯಂತ್ರಕ ಕ್ಯುರಿಟೀಸ್ ಅಂಡ್ ಎಕ್ಸಚೇಂಜ ಬೋರ್ಡ ಆಫ್ ಇಂಡಿಯಾ (SEBI) ತಿಳಿಸಿದೆ.

4 ಲಕ್ಷ ಕೋಟಿ ಅಮೆರಿಕನ್ ಡಾಲರ್ ಮಾರುಕಟ್ಟೆ ಮೌಲ್ಯದ ಭಾರತದ ಅತಿ ದೊಡ್ಡ ಷೇರು ವಿನಿಮಯ ಕೇಂದ್ರ ಎನ್​ಎಸ್​ಇಗೆ ಮಾಜಿ ಸಿಇಒ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಚಿತ್ರಾ ರಾಮಕೃಷ್ಣ ತಾನು ನೋಡದ ಮತ್ತು ತನಗೆ ಪರಿಚಯವೇ ಇಲ್ಲದ ಹಿಮಾಲಯದ ಯೋಗಿಯೊಬ್ಬರ ಸಲಹೆ ಪಡೆದುಕೊಂಡೇ ನಿರ್ಧಾರವನ್ನು ಕೈಗೊಳ್ಳುತ್ತಿದ್ದರು. NSEಯ ಪ್ರಮುಖ ವ್ಯವಹಾರ ಯೋಜನೆಗಳು ಮತ್ತು ಅಜೆಂಡಾ ಸೇರಿದಂತೆ ಹಲವಾರು ವಿಚಾರಗಳನ್ನು ಆ ಅಪರಿಚಿತ ಯೋಗಿಯೊಂದಿಗೆ ಹಂಚಿಕೊಂಡಿದ್ದಾರೆ ಎಂಬ ವಿಚಾರವನ್ನು ಸೆಬಿ ಬಹಿರಂಗಪಡಿಸಿದೆ.

ಹಿಮಾಲಯದ ಯೋಗಿಯ ಮಾತಿನಂತೆ ಶೇರು ಪೇಟೆಯ ನಿರ್ಧಾರ ತೆಗೆದುಕೊಳ್ಳುತ್ತಿದ್ದ
ಚಿತ್ರಾ ರಾಮಕೃಷ್ಣ ಅವರು 2013 ಮತ್ತು 2016 ರ ನಡುವೆ ಎನ್ ಎಸ್ ಇ ನ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಸಿಇಒ ಆಗಿದ್ದರು ಮತ್ತು “ವೈಯಕ್ತಿಕ ಕಾರಣಗಳನ್ನು” ಉಲ್ಲೇಖಿಸಿ ರಾಜೀನಾಮೆ ನೀಡಿದ್ದರು.

ಎನ್‌ಎಸ್‌ಇ ಮಾಜಿ ಎಂಡಿ ಮತ್ತು ಸಿಇಒ ಚಿತ್ರಾ ರಾಮಕೃಷ್ಣ ಅವರು ಮತ್ತು ಇತರರ ವಿರುದ್ಧ ತೆರಿಗೆ ವಂಚನೆ ತನಿಖೆಯ ಭಾಗವಾಗಿ ಮುಂಬೈನಲ್ಲಿ ಆದಾಯ ತೆರಿಗೆ ಇಲಾಖೆ ಇತ್ತೀಚೆಗೆ ದಾಳಿ ನಡೆಸಿ ಪರಿಶೀಲಿಸಿದಾಗ ಈ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿತ್ತು.

ಎನ್ಎಸ್ಇ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಸುಬ್ರಮಣಿಯನ್ ಅವರನ್ನು ಸಿಬಿಐ ಬಂಧಿಸಿದೆ. ಆನಂದ ಸುಬ್ರಮಣಿಯನ್ ಅವರು ಏಪ್ರಿಲ್ 01, 2015 ರಿಂದ ಅಕ್ಟೊಬರ್ 21, 2016 ರವರೆಗೆ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿದ್ದಾಗ ಚಿತ್ರಾ ರಾಮಕೃಷ್ಣ ಅವರಿಗೆ ಗ್ರುಪ್ ಆಪರೇಟಿಂಗ್ ಆಫೀಸರ್ ಮತ್ತು ಸಲಹೆಗಾರರಾಗಿ ಮರು ನೇಮಕ ಮಾಡಲಾಗಿತ್ತು.

ಸಿಬಿಐ ಅಧಿಕಾರಿಗಳು ಆನಂದ ಸುಬ್ರಮಣಿಯನ್ ಅವರ ನಿವಾಸದಿಂದ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಆಗಿನ ಎನ್‌ಎಸ್‌ಇ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಅವರ ಮೇಲೆ ಪ್ರಭಾವ ಬೀರಲು ‘ಯೋಗಿ’ಯಂತೆ ನಟಿಸಿದ್ದಾರೆ ಎಂದು ಸೆಬಿ ವರದಿಯಲ್ಲಿ ಹೇಳಲಾಗಿದೆ.
ಈ ಯೋಗಿಯೇ ಆನಂದ​ ಸುಬ್ರಮಣಿಯನ್​ ಅವರ ನೇಮಕಕ್ಕೆ ಚಿತ್ರಾಗೆ ಮಾರ್ಗದರ್ಶನ ನೀಡಿದ್ದರು ಎಂದು ಕೂಡಾ ವರದಿಯು ಹೇಳಿದೆ.

ಈ ಯೋಗಿ ಎಲ್ಲಾ ವಿಷಯದಲ್ಲಿ ನಿರ್ಧಾರ ಕೈಗೊಳ್ಳುತ್ತಿದ್ದ. ರಾಮಕೃಷ್ಣ ಅವರು “ಕೇವಲ ಅವರ ಕೈಯಲ್ಲಿ ಬೊಂಬೆಯಾಗಿತ್ತು” ಎಂದು ಸೆಬಿ ಹೇಳಿದೆ.

ಈ ಯೋಗಿಗೆ ಸೇರಿದ್ದು ಎಂದು ಹೇಳಲಾದ ಇಮೇಲ್‌ ವಿಳಾಸಕ್ಕೆ ಸೆಬಿಯು ಕಳುಹಿಸಿದ ಪ್ರಶ್ನೆಗಳಿಗೆ ಯಾವುದೇ ಪ್ರತಿಕ್ರಿಯೆ ಇದುವರೆಗೆ ಬಂದಿಲ್ಲ.

You might also like
Leave a comment