This is the title of the web page

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆದು ಭವಿಷ್ಯ ರೂಪಿಸಿಕೊಳ್ಳಿ

ಹುಬ್ಬಳ್ಳಿ, ೨೭(ಸಮದರ್ಶಿ ಸುದ್ದಿ)- ಸೋಮವಾರದಿಂದ ಆರಂಭವಾಗಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ರಾಜ್ಯದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಯಾವುದೇ ಭಯವಿಲ್ಲದೇ ಪರೀಕ್ಷೆ ಬರೆದು, ತಮ್ಮ ಭವಿಷ್ಯ ರೂಪಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ಧತೆ ಆಗಿದೆ. ಶಿಕ್ಷಣ ಇಲಾಖೆ ಮತ್ತು ಗೃಹ ಇಲಾಖೆ ಎಲ್ಲ ತಯಾರಿ ಮಾಡಿಕೊಂಡಿದೆ. ಮಕ್ಕಳು ಶಾಲಾ ಸಮವಸ್ರ್ತದಲ್ಲಿ ಬಂದು ಪರೀಕ್ಷೆ ಬರೆಯಬೇಕು ಎಂದರು.

ಮಕ್ಕಳಿಗೆ ಈಗ ಪರೀಕ್ಷೆ ಮತ್ತು ಪ್ರಶ್ನೆಗಳ ವಿಷಯ ಮಾತ್ರ ತಲೆಯಲ್ಲಿರಬೇಕು. ಬೇರೆ ವಿಚಾರಗಳ ಬಗ್ಗೆ ಯೋಚಿಸದೇ ಯಾವುದೇ ಭಯವಿಲ್ಲದೇ ಪರೀಕ್ಷೆ ಬರೆಯಿರಿ ಮತ್ತು ನಿಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳಿ ಎಂದು ಮುಖ್ಯಮಂತ್ರಿಗಳು ರಾಜ್ಯದ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಿದ್ದಾರೆ.

ಕೈಗಾರಿಕಾಭಿವೃದ್ಧಿ ನಿಟ್ಟಿನಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ.
ಎರಡು ವರ್ಷಗಳ ಕಾಲ ಕೋವಿಡ್ ಇದ್ದ ಕಾರಣ ಯಾವುದೇ ಅಭಿವೃದ್ಧಿ ಆಗಿಲ್ಲ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪರ್ವ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

You might also like
Leave a comment