This is the title of the web page

ನಾನು ಮನಸ್ಸು ಮಾಡಿದರೆ ಮುಖ್ಯಮಂತ್ರಿ ಆಗುತ್ತೇನೆ : ಜನಾರ್ದನ ರೆಡ್ಡಿ

ಬಳ್ಳಾರಿ: ನಾನು ಮನಸ್ಸು ಮಾಡಿದರೆ ಮುಂದೊಂದು ದಿನ ಸಿಎಂ ಆಗುತ್ತೇನೆ. ಮನಸ್ಸು ಮಾಡಿದರೆ ಯಾವಾಗ ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸೋಮಶೇಖರರೆಡ್ಡಿ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ರೆಡ್ಡಿ-ರಾಮುಲು ಸೋದರರಿಗೆ ಹಣದ ಅವಶ್ಯಕತೆ ಇಲ್ಲ. ನನಗೆ ಶಾಸಕ ಆಗಬೇಕು, ಮಂತ್ರಿ ಆಗಬೇಕೆಂಬ ಆಸೆಯಿಲ್ಲ ಎಂದರು.

ಯಾರಿಗೂ ಕೊಡಲಾರದಷ್ಟು ಕಷ್ಟ ಕೊಟ್ಟರು. ಆದರೂ ನಾನಿಂದು ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಅಂತಹ ವಿಶೇಷ ಆಶೀರ್ವಾದವನ್ನು ಕನಕ ದುರ್ಗಮ್ಮ ನೀಡಿದ್ದಾಳೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

You might also like
Leave a comment