ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಾಡಲಿ : ಜಿಲ್ಲಾಧಿಕಾರಿ

A B Dharwadkar
ಮನೆಗಳ ಮೇಲೆ  ರಾಷ್ಟ್ರಧ್ವಜ ಹಾರಾಡಲಿ : ಜಿಲ್ಲಾಧಿಕಾರಿ

ಬೆಳಗಾವಿ, ಆ. 12: “ನನ್ನ ಮಣ್ಣು, ನನ್ನ ದೇಶ” ಕಾರ್ಯಕ್ರಮದ ಅಂಗವಾಗಿ ಹರ್ ಘರ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ. 13 ರಿಂದ 15 ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದ್ದಾರೆ.

ರಾಜ್ಯಾದ್ಯಂತ ಅಗಸ್ಟ 13 ರಿಂದ 15 ರವರೆಗೆ ಹರ್ ಘರ ತಿರಂಗಾ ಅಭಿಯಾನವನ್ನು ಆಯೋಜಿಸಲಾಗಿದೆ. ಸಾರ್ವಜನಿಕರೂ ಸ್ವಯಂಪ್ರೇರಿತರಾಗಿ ಭಾಗವಹಿಸಿ, ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಧ್ವಜ ಶಿಷ್ಟಾಚಾರ ಪಾಲನೆ ಮಾಡಿ, ರಾಷ್ಟ್ರಧ್ವಜ ಹಾರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಗೆ ಒಟ್ಟಾರೆ 35 ಸಾವಿರ ರಾಷ್ಟ್ರ ಧ್ವಜಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ, ಪುರಸಭೆ, ಪಟ್ಟಣ ಪಂಚಾಯತಿ ಹಾಗೂ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಸಾರ್ವಜನಿಕರಿಗೆ ರಾಷ್ಟ್ರಧ್ವಜ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಪ್ರತಿ ರಾಷ್ಟ್ರಧ್ವಜಕ್ಕೆ ರೂ.25.50 ದರ ನಿಗದಿಪಡಿಸಲಾಗಿದೆ. ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.