ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಐವರು ನ್ಯಾಯಮೂರ್ತಿಗಳ ಕೊಲಿಜಿಯಂ ಕರ್ನಾಟಕ, ಹಿಮಾಚಲ ಪ್ರದೇಶ ಹೈಕೋರ್ಟ್ಗಳಿಗೆ ಐವರು ನ್ಯಾಯಮೂರ್ತಿಗಳನ್ನು ನೇಮಿಸಿದೆ.
ಹಿಮಾಚಲ ಪ್ರದೇಶ ಹೈಕೋರ್ಟ್ ಇಬ್ಬರು ಹಿರಿಯ ವಕೀಲರಾದ ಜಿಯಾ ಲಾಲ್ ಭಾರದ್ವಾಜ್ ಮತ್ತು ರೋಮೇಶ್ ವರ್ಮಾ ಅವರನ್ನು ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವಕ್ಕೆ ಕೊಲಿಜಿಯಂ ಅನುಮೋದನೆ ನೀಡಿದೆ.
ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಗಳನ್ನಾಗಿ ನೇಮಿಸುವ ಪ್ರಸ್ತಾವಕ್ಕೂ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮ್ಮತಿ ನೀಡಿದೆ.
ನ್ಯಾಯಾಂಗ ಅಧಿಕಾರಿಗಳಾದ ಗೀತಾ ಭರತರಾಜ ಶೆಟ್ಟಿ ಕಡಬ, ಮುರಳೀಧರ ಪೈ ಬೊರ್ಕಟ್ಟೆ ಹಾಗೂ ತ್ಯಾಗರಾಜ ನಾರಾಯಣ ಇನವಳ್ಳಿ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿ ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಅವರನ್ನು ಕಾಯಂ ನ್ಯಾಯಮೂರ್ತಿಯನ್ನಾಗಿ ನೇಮಿಸುವ ಪ್ರಸ್ತಾವಕ್ಕೂ ಕೊಲಿಜಿಯಂ ಅನುಮೋದನೆ ಕೊಟ್ಟಿದೆ.
ತ್ರಿಪುರಾ ಹೈಕೋರ್ಟ್ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿರುವ ಬಿಸ್ವಜಿತ್ ಪಾಲಿತ್ ಅವರನ್ನು ಕಾಯಂ ನ್ಯಾಯಾಧೀಶರನ್ನಾಗಿ ನೇಮಿಸಲು ಕೊಲಿಜಿಯಂ ಅನುಮೋದನೆ ನೀಡಿದೆ.
ಮದ್ರಾಸ್ ಹೈಕೋರ್ಟ್ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ಎನ್.ಸೆಂಥಿಲ್ಕುಮಾರ್ ಮತ್ತು ಜಿ. ಅರುಲ್ ಮುರುಗನ್ ಅವರನ್ನು ನ್ಯಾಯಾಲಯದ ಕಾಯಂ ನ್ಯಾಯಾಧೀಶರನ್ನಾಗಿ ನೇಮಿಸಬೇಕೆಂದು ಕೊಲಿಜಿಯಂ ಶಿಫಾರಸು ಮಾಡಿದೆ.

