ಬೆಂಗಳೂರು: ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೋಳಿ ವಿರುದ್ಧ ಖಾಸಗಿ ದೂರು ದಾಖಲಾಗಿದೆ.
ವಕೀಲ ದಿಲೀಪ ಕುಮಾರ ಎಂಬುವರು ಐಪಿಸಿ ಸೆಕ್ಷನ್ 153, 500ರ ಅಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟನಲ್ಲಿ ಪ್ರಕರಣ ದಾಖಲಾಗಿದ್ದು, ಮ್ಯಾಜಿಸ್ಟ್ರೇಟ ಕೋರ್ಟ ನವೆಂಬರ 18ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಹಿಂದೂ ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿರುವುದು ವಿವಾದಕ್ಕೀಡಾಗಿದೆ. ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು.. ಅದು ನಮ್ಮದೇ.. ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ, ಕಜಕಿಸ್ತಾನ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ.. ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ.. ಇದರ ಬಗ್ಗೆ ಚರ್ಚೆ ಆಗಬೇಕು ಎಂದು ಸತೀಶ ಜಾರಕಿಹೊಳಿ ಹೇಳಿದ್ದರು.