This is the title of the web page

ಮುಸ್ಲಿಮರಿಗೆ ಗುತ್ತಿಗೆ ನೀಡಬಾರದು ಎಂಬ ನಿಯಮ ಮಾಡಿದ್ದು ಕಾಂಗ್ರೆಸ್

ಬೆಂಗಳೂರು, ೨೪- ಹಿಂದೂಗಳ ಜಾತ್ರೆಗಳಲ್ಲಿ ಮುಸ್ಲಿಮರಿಗೆ ಗುತ್ತಿಗೆ ನೀಡಬಾರದು ಎಂಬ ನಿಯಮ ರೂಪಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಉಡುಪಿ ಜಿಲ್ಲೆ ಕಾಪುವಿನ ಮಾರಿಗುಡಿ ಜಾತ್ರೆಯಲ್ಲಿ ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿದ ವಿಚಾರವನ್ನು ಬುಧವಾರ ವಿಧಾನಸಭೆ ಶೂನ್ಯವೇಳೆಯಲ್ಲಿ  ಕಾಂಗ್ರೆಸ್ ಸದಸ್ಯರು ಪ್ರಸ್ತಾಪಿಸಿ, ಈ ಬಗ್ಗೆ ದೇವಸ್ಥಾನಗಳ ಬಳಿ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಹಾಕುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ಸಚಿವ ಮಾಧುಸ್ವಾಮಿ ಅವರು ಪ್ರತಿಕ್ರಿಯೆ ನೀಡಿ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆಯಡಿ ಹಿಂದೂಯೇತರ ಮಾರಾಟಗಾರರು ದೇವಸ್ಥಾನಗಳ ಆವರಣ ಅಥವಾ ಆಸ್ತಿಗಳಲ್ಲಿ ವ್ಯಾಪಾರ ನಡೆಸುವುದನ್ನು ನಿಷೇಧಿಸಿದ್ದು ಅಂದಿನ ಕಾಂಗ್ರೆಸ್ ಸರ್ಕಾರ. ಈ ಕುರಿತು ಕಾನೂನು ಜಾರಿಗೊಳಿಸಲಾಗಿದೆ ಎಂದೂ ತಿಳಿಸಿದರು.

2003 ರಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆಯಡಿ ರೂಪಿಸಲಾದ ನಿಯಮಗಳ ಪ್ರಕಾರ, ಹಿಂದೂಯೇತರರಿಗೆ ಸರ್ಕಾರಿ ಸ್ವಾಮ್ಯದ ದೇವಾಲಯಗಳಿಗೆ ಸೇರಿದ ನೆಲ, ಕಟ್ಟಡ ಅಥವಾ ಇತರ ಯಾವುದೇ ಆಸ್ತಿಯನ್ನು ಗುತ್ತಿಗೆ ನೀಡಲಾಗುವುದಿಲ್ಲ ಎಂದು ಇದೆ. ಸಮಾಜದಲ್ಲಿ ಶಾಂತಿ ಹಾಳು ಮಾಡುವ ಇಂತಹ ಘಟನೆಗಳಿಗೆ ಸರಕಾರ ಪ್ರೋತ್ಸಾಹ ನೀಡುತ್ತಿದೆ ಎನ್ನುವುದು ಸರಿಯಲ್ಲ. ಇದರಲ್ಲಿ ”ಸರಕಾರದ ಯಾವುದೇ ಪಾತ್ರವಿಲ್ಲ ಎಂದು ಅವರು ಹೇಳಿದರು.

ಈ ನಿಯಮಗಳನ್ನು ರೂಪಿಸಿದ್ದು ಕಾಂಗ್ರೆಸ್, ಬಿಜೆಪಿಯಲ್ಲ ರೂಪಿಸಿಲ್ಲ. ರಸ್ತೆಗಳಲ್ಲಿ ಮತ್ತು ದೇವಸ್ಥಾನಗಳಿಂದ ದೂರದಲ್ಲಿ ಬ್ಯಾನರ್‌ಗಳನ್ನು ಹಾಕಿದರೆ ಮಾತ್ರ ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

You might also like
Leave a comment