ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸುಪುತ್ರ ಮತ್ತು ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಿಗೆ ಮಂಗಳವಾರದಂದು ಚಾಕು ಇರಿದಿರುವ ಘಟನೆ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ನಡೆದಿದೆ.
ಬೆಳಗುಂದಿ ಗ್ರಾಮದ ಕಾರು ಚಾಲಕರಾಗಿರುವ ಬಸವಂತ ಗಣಪತ ಕಡೋಲ್ಕರ್ ಎಂಬುವರಿಗೆ ಚಾಕು ಇರಿಯಲಾಗಿದ್ದು ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಾಲ್ಕು ಕಡೆ ಇರಿಯಲಾಗಿದೆ. ಯಾವ ಕಾರಣಕ್ಕೆ ಚಾಕು ಇರಿಯಲಾಗಿದೆ ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಾಗಿದೆ. ಪೊಲೀಸರು ಚಾಕು ಇರಿದವರ ಪತ್ತೆಗೆ ಜಾಲ ಬೀಸಿದ್ದಾರೆ.



