ಹೊಸದಿಲ್ಲಿ : ಮೇಲ್ವರ್ಗದವರಲ್ಲಿ ಆರ್ಥಿಕವಾಗಿ ದುರ್ಬಲರಾದವರಿಗೆ ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದ ತೀರ್ಪಿನ ವಿರುದ್ಧ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರೊಬ್ಬರು ಸುಪ್ರೀಮ ಕೋರ್ಟನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.
ಸಾಮಾನ್ಯ ವರ್ಗದಲ್ಲಿ ಶೇಕಡಾ 10ರಷ್ಟು ಇಡಬ್ಲ್ಯೂಎಸ್ ಮೀಸಲಾತಿಯನ್ನು ಒದಗಿಸುವ ಸಂವಿಧಾನದ 103ನೇ ತಿದ್ದುಪಡಿ ಕಾಯ್ದೆ 2019ರ ಸಿಂಧುತ್ವವನ್ನು ಸುಪ್ರೀಮ ಕೋರ್ಟ ಎತ್ತಿಹಿಡಿದಿತ್ತು.
ಇಡಬ್ಲ್ಯೂಎಸ್ ತಿದ್ದುಪಡಿಯು ಸಮಾನತೆಯ ಸಂಹಿತೆಯನ್ನು ಉಲ್ಲಂಘಿಸುವುದಿಲ್ಲ ಅಥವಾ ಸಂವಿಧಾನದ ಅಗತ್ಯ ಲಕ್ಷಣಗಳನ್ನು ಉಲ್ಲಂಘಿಸುವುದಿಲ್ಲ ಮತ್ತು 50% ಉಲ್ಲಂಘನೆಯು ಮೂಲಭೂತ ರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಮೂರ್ತಿ ಮಹೇಶ್ವರಿ ಹೇಳಿದ್ದರು.