ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ದಿಢೀರ ಮುಂದೂಡಲಾಗಿದೆ.
ವರ್ತೂರು ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೇವಾಲಾ ನೇತೃತ್ವದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ವೇಳೆ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಮುಂದೂಡಲಾಗಿದೆ.
ನವೆಂಬರ್ 27ಕ್ಕೆ ಜೂಮ್ ಮೂಲಕ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಸಭೆ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರನ್ನು ತಕ್ಷಣ ವರ್ತೂರು ಕೋಡಿ ಬಳಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆ ಮುಂದುಡಲಾಗಿದೆ ಎಂದು ತಿಳಿದುಬಂದಿದೆ.