Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ರಾಜ್ಯದ ಎಲ್ಲ ಶಾಲೆಗಳಲ್ಲಿ ಸಂವಿಧಾನ ದಿನ ಆಚರಣೆಗೆ ಆದೇಶ 


ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ನವೆಂಬರ 26ನೇ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ನವೆಂಬರ 26 ಈ ದಿನವನ್ನು ಭಾರತ ಸಂವಿಧಾನವು ಭಾರತದ ಸಂವಿಧಾನ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26ನೇ ನವೆಂಬರ 1949ರ ಸವಿನೆನಪಿಗಾಗಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ.

ಭಾರತ ಸರ್ಕಾರದ, ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪತ್ರದಲ್ಲಿ ಸೂಚಿಸಿರುವಂತೆ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳು ಮತ್ತು ತತ್ವಗಳ ಅರಿವನ್ನು ಮೂಡಿಸುವಂತಹ Know Your Constitution ಕಾರ್ಯಕ್ರಮವನ್ನು ಶಾಲಾ ಹಂತದಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಆಯೋಜಿಸಲು ಸೂಚನೆ ನೀಡಲಾಗಿದೆ.

ಎಲ್ಲಾ ಶಾಲೆಗಳಲ್ಲಿ ದಿನಾಂಕ:26.11.2022ರಂದು ಬೆಳಿಗ್ಗೆ 11:00 ಗಂಟೆಗೆ ಏಕಕಾಲಕ್ಕೆ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು, ಶಾಲಾ ಆವರಣದಲ್ಲಿನ ಪ್ರಮುಖ ಸ್ಥಳದಲ್ಲಿ ಭಾರತ ಸಂವಿಧಾನದ ಪೀಠಿಕೆ ಮತ್ತು ಮೂಲಭೂತ ಕರ್ತವ್ಯಗಳು ಮತ್ತು ಶಾಲೆಗಳಲ್ಲಿ ಸಂವಿಧಾನದ ವಿವಿಧ ಅಂಶಗಳ ಕುರಿತು ಚರ್ಚಾ ಸ್ಪರ್ಧೆ, ರಸಪ್ರಶ್ನೆಗಳು / ಪ್ರಬಂಧ ಸ್ಪರ್ಧೆಗಳು ಇತ್ಯಾದಿ ಕಾರ್ಯಕ್ರಮವನ್ನು ಪೂರ್ವದಲ್ಲಿ ಹಮ್ಮಿಕೊಳ್ಳುವಂತೆ ಆದೇಶ ಹೊರಡಿಸಿದೆ.


A B Dharwadkar
the authorA B Dharwadkar

Leave a Reply