This is the title of the web page

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ

ಬೆಂಗಳೂರು, 9- ರಾಜ್ಯದಲ್ಲಿ ಮಹಾಮಾರಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು ಇಂದು ಭಾನುವಾರ ಹೊಸದಾಗಿ 12000 ಹೊಸ ಪ್ರಕರಣಗಳು ದೃಢಪಟ್ಟಿವೆ.

ಬುಲೆಟಿನ್ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು ಬೆಂಗಳೂರಿನಲ್ಲಿಯೇ 9020 ಕೇಸ್‍ಗಳು ದೃಢಪಟ್ಟಿವೆ. ಇಂದು ಶೇ.6.33ರಷ್ಟು ಪಾಸಿಟಿವಿಟಿ ರೇಟ್ ದಾಖಲಾಗಿದೆ. ರಾಜ್ಯದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಬೆಂಗಳೂರಿನಲ್ಲಿ ಇಬ್ಬರು ಮೃತರಾಗಿದ್ದಾರೆ.

ಅದರಂತೆ ಇಂದು 901 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 49,602 ಆಕ್ಟಿವ್ ಕೇಸ್‍ಗಳು ಬಾಕಿಯಿವೆ ಎಂದು ತಿಳಿಸಿದ್ದಾರೆ.

You might also like
Leave a comment