This is the title of the web page

ಕಿತ್ತೂರು ಸೈನಿಕ ಶಾಲೆಯ 12 ವಿದ್ಯಾರ್ಥಿನಿಯರಿಗೆ ಕೊರೋನಾ

ಕಿತ್ತೂರು, 8- ಇಲ್ಲಿಯ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯ 12 ವಿದ್ಯಾರ್ಥಿನಿಯರಲ್ಲಿ ಕೊರೋನಾ ಸೋಂಕು ಕಂಡು ಬಂದಿದ್ದು ಶಾಲೆಯನ್ನು ಸೀಲ್ ಡೌನ್ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ.

ಶಾಲೆಯ ಹಲವು ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ 102 ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ರ್ಯಾಪಿಡ್ ಟೆಸ್ಟ್ ಮಾಡಿದ್ದರು. ಈ ಪೈಕಿ 12 ವಿದ್ಯಾರ್ಥಿನಿಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕಿತರು 15 ರಿಂದ 18 ವರುಷದವರಿದ್ದಾರೆ.

ಸೋಂಕಿತ ವಿದ್ಯಾರ್ಥಿನಿಯರಿಗೆ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

You might also like
Leave a comment