This is the title of the web page

ವಸತಿ ಶಾಲೆಯ 40 ವಿದ್ಯಾರ್ಥಿಗಳಿಗೆ ಕೊರೋನಾ

ಚಿಕ್ಕಮಗಳೂರು, 5- ಎನ್.ಆರ್.ಪುರ ತಾಲೂಕಿನ ಸಿಗೋಡಿನಲ್ಲಿರುವ ಜವಾಹರಲಾಲ ನವೋದಯ ವಸತಿ ವಿದ್ಯಾಲಯದ 40 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಶಾಲೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಆದರೆ ಸೋಂಕಿತ ವಿದ್ಯಾರ್ಥಿಗಳಲ್ಲಿ ಸೋಂಕಿತ ಲಕ್ಷಣ ಕಂಡು ಬಂದಿಲ್ಲ.

ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ ಸುಮಾರು 418 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಗೆ ಕೊರೋನಾ ದಾಳಿ ಮಾಡಿದೆ. ಶಾಲೆಗೆ ಡಿ.ಎಚ್.ಓ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರಂಭದಲ್ಲಿ ಮೂವರು ವಿದ್ಯಾರ್ಥಿಗಳು ಹಾಗೂ ನಾಲ್ಕು ಮಂದಿ ಸಿಬ್ಬಂದಿಗೆ ಕೊರೋನಾ ಕಾಣಿಸಿಕೊಂಡಿತ್ತು. ವಸತಿ ಶಾಲೆಗೆ ಆರೋಗ್ಯ ಸಿಬ್ಬಂದಿ ನೇಮಕ ಮಾಡಲಾಗಿದೆ.

ಪತ್ತೆಯಾದವರಲ್ಲಿ ಯಾವುದೇ ರೋಗದ ಲಕ್ಷಣಗಳಿಲ್ಲ. ಹೀಗಾಗಿ ಜಿಲ್ಲಾಡಳಿತ ವಸತಿ ಶಾಲೆಯಲ್ಲಿಯೇ ಎಲ್ಲರಿಗೂ ಕ್ವಾರಂಟೀನ್ ಮಾಡಿಸಿದೆ.

You might also like
Leave a comment