This is the title of the web page

ದೇಶದಲ್ಲಿ ಕಡಿಮೆಯಾಗುತ್ತಿರುವ ಕೊರೋನಾ

ಹೊಸದಿಲ್ಲಿ, 31- ದೇಶದಲ್ಲಿ ಹೊಸ ಕೊರೋನಾ ಪ್ರಕರಣಗಳು ಕಡಿಮೆಯಾಗಿದ್ದು ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಗೊಳ್ಳುವ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 2,09,918 ಹೊಸ ಪ್ರಕರಣಗಳು ಪತ್ತೆಯಾಗಿವೆ. 24 ಗಂಟೆಗಳಲ್ಲಿ 959 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,13,02,440ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,95,050ಕ್ಕೆ ಏರಿಕೆಯಾಗಿದೆ. ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 18,31,268ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,62,628 ಮಂದಿ ಗುಣಮುಖರಾಗುವುದರೊಂದಿಗೆ ಈ ವರೆಗೆ ಚೇತರಿಸಿಕೊಂಡವರ ಸಂಖ್ಯೆ 3,89,76,122ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,66,03,96,227 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

You might also like
Leave a comment