This is the title of the web page

ರಾಜ್ಯದಲ್ಲಿ ಕೊರೋನಾ ಹೆಚ್ಚಳ, ಬೆಂಗಳೂರಲ್ಲಿ ಅಧಿಕ

ಬೆಂಗಳೂರು, 23- ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಕಳೆದ 24 ಗಂಟೆಯಲ್ಲಿ 139 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 39,46,874ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಆದ್ದರಿಂದ ಸಾವಿನ ಸಂಖ್ಯೆ 40057 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿಯೇ ಶನಿವಾರ 132 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,82,879ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 55 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,05096ಕ್ಕೆ ಏರಿಕೆಯಾಗಿದೆ. ಇನ್ನು 1679 ಸಕ್ರಿಯ ಪ್ರಕರಣಗಳಿವೆ.

You might also like
Leave a comment