This is the title of the web page

12 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ

ಹೊಸದಿಲ್ಲಿ, 26- 12 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ.

ಶನಿವಾರ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡುತ್ತಾ ಬೂಸ್ಟರ್ ಡೋಸ್ ಮತ್ತು ಮಕ್ಕಳ ಲಸಿಕೆ ಕುರಿತು ಮಾತನಾಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಡಿಸಿಜಿಐ Drugs Controller General of India 12 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ಬಳಕೆಗೆ ಅನುಮತಿ ನೀಡಿದೆ.

ದೇಶದಲ್ಲಿ ಓಮಿಕ್ರಾನ್ ಸೊಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ತಜ್ಞರು ಮೂರನೇ ಅಲೆ ಮಕ್ಕಳಿಗೆ ಪರಿಣಾಮ ಬೀರುತ್ತದೆ ಎಂಬ ಅಭಿಪ್ರಾಯ ತಿಳಿಸಿದ್ದರು. ಇದೀಗ ಮಕ್ಕಳಿಗೆ ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ.

ಐಸಿಎಂಆರ್ ಮತ್ತು ಹೈದರಾಬಾದ್ ಮೂಲದ ಲಸಿಕೆ ತಯಾರಕ ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಅನ್ನು ಅಭಿವೃದ್ಧಿಪಡಿಸಿದ್ದು, ಕಳೆದ ಅಕ್ಟೋಬರ್‌ನಲ್ಲಿ ಕೋವ್ಯಾಕ್ಸಿನ್‌ ಲಸಿಕೆಯನ್ನು 12-18ರ ವರ್ಷದ ಮಕ್ಕಳಿಗೆ ಬಳಸಲು ಕೊರೋನಾ ಲಸಿಕೆ ಸಂಬಂಧಿಸಿದ ತಜ್ಞರ ಸಮಿತಿ ಅನುಮೋದನೆ ನೀಡಿತ್ತು. ಅಂತಿಮ ಹಂತದ ಅನುಮೋದನೆಗಾಗಿ ಡಿಸಿಜಿಐಗೆ  ಕಳುಹಿಸಿಕೊಡಲಾಗಿತ್ತು.

ಕೋವ್ಯಾಕ್ಸಿನ್‌ ಲಸಿಕೆಯನ್ನು ವಯಸ್ಕರಂತೆಯೇ 28 ದಿನಗಳ ಅಂತರದಲ್ಲಿ ಎರಡು ಡೋಸ್‌ ಮೂಲಕ ನೀಡಲಾಗುತ್ತದೆ. ಪ್ರಯೋಗ ಹಂತದಲ್ಲಿ ಲಸಿಕೆಯು ವಯಸ್ಕರಷ್ಟೇ ಮಕ್ಕಳ ಮೇಲೂ ಪರಿಣಾಮಕಾರಿಯಾಗಿದೆ. ಕೋವಿಡ್‌ ವೈರಸ್‌ ವಿರುದ್ಧ ಮಕ್ಕಳಿಗೆ ಶೇ.77.8ರಷ್ಟು ರಕ್ಷಣೆ ಒದಗಿಸುತ್ತದೆ ಎಂದು ಹೇಳಲಾಗಿದೆ.

ವಯಸ್ಕರ ಲಸಿಕೆಯೇ ಬಳಕೆ
ಸದ್ಯ ವಯಸ್ಕರಿಗೆ ಬಳಸಲಾಗುತ್ತಿರುವ ಕೋವ್ಯಾಕ್ಸಿನ್‌ ಲಸಿಕೆಯನ್ನೇ ಮಕ್ಕಳ ಮೇಲೂ ಪ್ರಯೋಗಕ್ಕೆ ಒಳಪಡಿಸಲಾಗಿತ್ತು. ದೇಶದ 6 ಕಡೆ 1000ಕ್ಕೂ ಹೆಚ್ಚು ಮಕ್ಕಳ ಮೇಲೆ ಲಸಿಕೆಯನ್ನು ಪ್ರಯೋಗಿಸಲಾಗಿತ್ತು. ಮಕ್ಕಳ ಮೇಲಿನ ಲಸಿಕೆಯ ಕ್ಲಿನಿಕಲ್‌ ಪ್ರಯೋಗ ವರದಿಯನ್ನು ಭಾರತ್‌ ಬಯೋಟೆಕ್‌ ಕಂಪನಿ ಕೇಂದ್ರೀಯ ಔಷಧ ಗುಣಮಟ್ಟನಿಯಂತ್ರಣ ಸಂಸ್ಥೆಗೆ ಸಲ್ಲಿಸಿತ್ತು. ಬಳಿಕ ವಿಷಯ ತಜ್ಞರ ಸಮಿತಿ ಇದನ್ನು ಪರಿಶೀಲಿಸಿ ಅನುಮೋದನೆ ಒಪ್ಪಿಗೆ ನೀಡಿತ್ತು.

    

You might also like
Leave a comment