ದಸರಾ ರಜೆಗೆ ದಿನಗಣನೆ ಆರಂಭ

A B Dharwadkar
ದಸರಾ ರಜೆಗೆ ದಿನಗಣನೆ ಆರಂಭ

ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬ‌ರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬ‌ರ್ ಹಾಗೂ ಅಕ್ಟೋಬರ್ ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ.

ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು,
ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ
ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅದರಂತೆ ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ.

2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬ‌ರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 18 ದಿನ ಇರಲಿದೆ.

ಅಕ್ಟೋಬರ್ 8 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2026ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2025- 2026ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.