This is the title of the web page

ಪ್ರಧಾನಿ ಭೇಟಿ ಹಿನ್ನೆಲೆ ಮುಖ್ಯಮಂತ್ರಿ ಬೊಮ್ಮಾಯಿಗೆ ಕೋವಿಡ್ ಟೆಸ್ಟ

 

ಬೆಂಗಳೂರು: ಮಂಗಳವಾರ ಮೈಸೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದು ಈ ಹಿನ್ನೆಲೆ ಕಾರ್ಯಕ್ರಮದಲ್ಲಿ ಭಾಗಿಯಾಗುವಂತಹ ಎಲ್ಲರಿಗೂ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಹೀಗಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕೂಡ ಇಂದು ಕೋವಿಡ್ ಪರೀಕ್ಷೆಗೆ ಒಳಗಾದರು.

ಮುಖ್ಯಮಂತ್ರಿ ಬೊಮ್ಮಾಯಿಯವರ ಆರ್ ಟಿ ನಗರದ ನಿವಾಸಕ್ಕೆ ಆಗಮಿಸಿದ ಆರೋಗ್ಯ ಸಿಬ್ಬಂದಿಗಳು, ಅವರ ಸ್ಪ್ಯಾಪ್ ಅನ್ನು ಪರೀಕ್ಷೆಗಾಗಿ ಕೊಂಡೊಯ್ದರು.

ಜೂನ್ 21ರಂದು ಮೈಸೂರಿನಲ್ಲಿ ನಡೆಯುವಂತ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

You might also like
Leave a comment