ಹೊಸದಿಲ್ಲಿ : ಬಹುನಿರೀಕ್ಷಿತ ಗುಜರಾತ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ, ಕೇಂದ್ರ ಚುನಾವಣಾ ಆಯುಕ್ತ ರಾಜೀವ ಕುಮಾರ, ಗುಜರಾತದಲ್ಲಿ ಡಿಸೆಂಬರ್ 1 ಮತ್ತು 5ಕ್ಕೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8ಕ್ಕೆ ಫಲಿತಾಂಶ ಹೊರ ಬೀಳಲಿದೆ ಎಂದು ಹೇಳಿದರು.
ಗುಜರಾತ್ ವಿಧಾನಸಭೆಯ ಅವಧಿಯು ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಗೊಳ್ಳುತ್ತದೆ. ಹಿಮಾಚಲ ಪ್ರದೇಶ ಸದನದ ಅವಧಿಯು 2023ರ ಜನವರಿ 8ಕ್ಕೆ ಮುಗಿಯಲಿದೆ. ಹಾಗಾಗಿ ಈ ಎರಡೂ ರಾಜ್ಯಗಳಿಗೆ ಒಂದೇ ಸಮಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಕೇಂದ್ರ ಚುನಾವಣಾ ಆಯೋಗವು ಅಕ್ಟೋಬರ್ 14ರಂದು ಹಿಮಾಚಲ ಪ್ರದೇಶಕ್ಕೆ ಮಾತ್ರ ಚುನಾವಣೆ ದಿನಾಂಕ ಘೋಷಿಸಿತು. ಇದೀಗ ಗುಜರಾತ್ ಚುನಾವಣೆ ದಿನಾಂಕವೂ ಘೋಷಣೆಯಾಗಿದೆ.
ಕಳೆದ ಅಕ್ಟೋಬರ 14ರಂದು ಚುನಾವಣಾ ಆಯೋಗ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಹಿಮಾಚಲ ಪ್ರದೇಶದ 68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನ.12ರಂದು ಮತದಾನ ನಡೆಯಲಿದೆ ಡಿ.8ರಂದು ಮತ ಎಣಿಕೆ ನಡೆಯಲಿದೆ.