This is the title of the web page

ಉಕ್ರೇನ್ ನಲ್ಲಿ ಹಾವೇರಿ ವಿದ್ಯಾರ್ಥಿಯ ಸಾವು

ಹಾವೇರಿ, 1- ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ಮಂಗಳವಾರ ಬೆಳಿಗ್ಗೆ ರಷ್ಯಾ ಪಡೆಗಳು ನಡೆಸಿದ ದಾಳಿಯಲ್ಲಿ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಕರ್ನಾಟಕದ ಮುಖ್ಯಮಂತ್ರಿಗಳ ಕಚೇರಿ ಪ್ರಕಾರ, ಮೃತರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ ಶೇಖರಪ್ಪ ಜ್ಞಾನಗೌಡರ (21) ಎಂದು ಹೇಳಲಾಗಿದೆ. ಆತ ಕಳೆದ ನಾಲ್ಕು ವರ್ಷಗಳಿಂದ ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ.

ಅರ್ಖಿಟೆಕ್ಟೋರಾ ಬೆಕೆಟೋವಾ ಮೆಟ್ರೋ ನಿಲ್ದಾಣದ ಬಂಕರ್‌ನಿಂದ ದಿನಸಿ ವಸ್ತುಗಳನ್ನು ತರಲು ನವೀನ ಹೊರಟಿದ್ದಾಗ ಖಾರ್ಕಿವ್‌ನ ಬೀದಿಯಲ್ಲಿ ಶೆಲ್ ದಾಳಿಯಿಂದ ಸಾವನ್ನಪ್ಪಿದ್ದಾನೆ.

ಪ್ರಥಮ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ರಾಣೆಬೆನ್ನೂರಿನ ಪ್ರವೀಣ ಅವರ ಸ್ನೇಹಿತರೊಬ್ಬರು ಮೃತ ಕುಟುಂಬದ ಸದಸ್ಯರಿಗೆ ಈ ವಿಷಯ ತಿಳಿಸಿದ್ದಾರೆ. ಸ್ಥಳೀಯ ಉಕ್ರೇನ್ ಕಾಲಮಾನ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಸಾವನ್ನು ದೃಢಪಡಿಸಿ ಟ್ವೀಟ್ ಮಾಡಿದ್ದಾರೆ. “ಗಹನವಾದ ದುಃಖದಿಂದ, ಇಂದು ಬೆಳಿಗ್ಗೆ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಾವು ಖಚಿತಪಡಿಸುತ್ತೇವೆ. ಸಚಿವಾಲಯವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ.

ಮೃತದೇಹವನ್ನು ಖಾರ್ಕಿವ್ ನಗರದ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮೃತ ನವೀನ ಸ್ನೇಹಿತರು ಮೃತ ವಿದ್ಯಾರ್ಥಿಯ ಕುಟುಂಬದವರಿಗೆ ಖಚಿತಪಡಿಸಿದ್ದಾರೆ.

”ಯುದ್ಧ ಪ್ರದೇಶವಾಗಿರುವುದರಿಂದ ಈಗ ಶವವನ್ನು ತರಲು ಸಾಧ್ಯವಾಗುತ್ತಿಲ್ಲ. ದೇಹವನ್ನು ಸಂರಕ್ಷಿಸಲು ಮತ್ತು ಸಾಧ್ಯವಾದಷ್ಟು ಬೇಗ ಭಾರತಕ್ಕೆ ತರಲು ಅವರು ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ” ವಿದೇಶಾಂಗ ಇಲಾಖೆ ಕಚೇರಿ ಹೇಳಿದೆ.

You might also like
Leave a comment