This is the title of the web page

ಲಸಿಕೆ ಪಡೆದ ಮೂರು ಮಕ್ಕಳ ಸಾವು

ಬೆಳಗಾವಿ, 16- ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೂಬೆಲ್ಲಾ ಲಸಿಕೆ ಪಡೆದು ಅಸ್ವಸ್ಥಗೊಂಡಿದ್ದ ಮೂರು ಕಂದಮ್ಮಗಳು ಚಿಕಿತ್ಸೆ ಫಲಿಸದೇ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಜಾವದವರೆಗೆ ಮೃತಪಟ್ಟಿವೆ.

ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ (13 ತಿಂಗಳು) ಹಾಗೂ ಮಧು ಉಮೇಶ್ ಕುರಗುಂದಿ (14 ತಿಂಗಳು) ಮತ್ತು ಮಲ್ಲಾಪುರ ಗ್ರಾಮದ ಚೇತನ (15 ತಿಂಗಳು) ಮೃತ ಮಕ್ಕಳು ಎಂದು ತಿಳಿದುಬಂದಿದೆ.

ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಒಟ್ಟು 17 ಮಕ್ಕಳಿಗೆ ರೂಬೆಲ್ಲಾ ಚುಚ್ಚುಮದ್ದು ನೀಡಿದ್ದರು. ಅವರಲ್ಲಿ ನಾಲ್ಕು ಮಕ್ಕಳು ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ. ಇನ್ನೊಂದು ಮಗುವಿನ ಪರಿಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದೆ.

You might also like
Leave a comment