ಬೆಂಗಳೂರು: ಮಾರ್ಚ17 ರಂದು ಪುನೀತ ರಾಜಕುಮಾರ ಜನ್ಮದಿನವನ್ನು ಸ್ಪೂರ್ತಿ ದಿನವಾಗಿ ಆಚರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಕನ್ನಡ,ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ ಸುನಿಲ ಕುಮಾರ , ಪುನೀತ ದಿನಾಚರಣೆಯನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡುವುದಕ್ಕೆ ಮನವಿ ಮಾಡಿದ್ದರು.
ಅದರಂತೆ ಈಗ ಪುನೀತ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಹೇಳಿದರು.