ಬೆಳಗಾವಿ : ರಾಜ್ಯದ ಗಮನ ಸೆಳೆದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಅಕ್ಟೋಬರ್ 19ರಂದು ನಡೆಯಲಿದೆ. ಆದರೆ ಶುಕ್ರವಾರದಂದು ಜಿಲ್ಲಾ ಸಹಕಾರಿ ಬ್ಯಾಂಕಿನ ಹುಕ್ಕೇರಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಸಂಬಂಧಿಸಿ ಭೀಮಸೇನ ಬಾಗಿ ಎಂಬವರು ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲ ಎಂಬ ಕಾರಣಕ್ಕೆ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿ ಅಲ್ಲಿನ ಚುನಾವಣೆಯನ್ನು ಮುಂದಕ್ಕೆ ಹಾಕಿತ್ತು.
ಆದರೆ ಇದೀಗ ರವಿವಾರ ಚುನಾವಣೆ ನಡೆಸಲು ಜಿಲ್ಲಾ ಚುನಾವಣಾ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಲಾಗಿದ್ದು ರವಿವಾರ ಚುನಾವಣೆ ಎಂದಿನಂತೆ ನಿಗದಿಯಾಗಿದೆ. ಒಮ್ಮೆ ಚುನಾವಣೆ ಪ್ರಕ್ರಿಯೆ ಆರಂಭವಾದರೆ ಅದನ್ನು ರದ್ದು ಮಾಡುವಂತಿಲ್ಲ. ಈ ಬಗ್ಗೆ ಮನವರಿಕೆ ಮಾಡಿದ್ದರಿಂದ ಚುನಾವಣೆ ನಿಗದಿಯಂತೆ ನಡೆಯಲಿದೆ. ನಮ್ಮ ಮನವಿಗೆ ಸ್ಪಂದಿಸಿ ನ್ಯಾಯಾಲಯ ನಿಗದಿಯಂತೆ ಚುನಾವಣೆಗೆ ಮುಂದಾಗಿರುವುದನ್ನು ಮಾಜಿ ಸಂಸದ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ರಮೇಶ್ ಕತ್ತಿ ಸ್ವಾಗತಿಸಿದ್ದು, ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸ ಇಮ್ಮಡಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

