ಬೆಂಗಳೂರು: ಗ್ರಾಮೀಣ ಪ್ರದೇಶದ ರೈತಾಪಿ ಯುವಕರನ್ನು ಮದುವೆಯಾಗುವ ಯುವತಿಯರಿಗೆ 10 ಲಕ್ಷ ರೂ. ಪ್ರೋತ್ಸಾಹ ಧನ ನೀಡುವಂತೆ ಹಸಿರು ಪ್ರತಿಷ್ಠಾನದಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಗಿದೆ.
ಗ್ರಾಮೀಣ ಪ್ರದೇಶದ ಬಹುತೇಕ ಯುವಕರು ನಗರ ಪಟ್ಟಣ ಪ್ರದೇಶಗಳಿಗೆ ವಲಸೆ ಬಂದಿದ್ದಾರೆ. ಅಲ್ಪಸಲ್ಪ ಯುವಕರು ಗ್ರಾಮೀಣ ಪ್ರದೇಶದಲ್ಲಿ ವ್ಯವಸಾಯ ಮಾಡಿಕೊಂಡಿದ್ದಾರೆ. ಆರ್ಥಿಕವಾಗಿ ಸದೃಢವಾಗಿದ್ದರೂ ರೈತಾಪಿ ಯುವಕರನ್ನು ಮದುವೆಯಾಗಲು ಯುವತಿಯರು ಹಿಂದೇಟು ಹಾಕುತ್ತಿದ್ದು, ನಗರ ಪ್ರದೇಶದ ಉದ್ಯೋಗಸ್ಥ ಯುವಕರನ್ನು ಮಾತ್ರ ಮದುವೆಯಾಗಲು ಬಯಸುತ್ತಾರೆ. ಹೀಗಾಗಿ ರೈತರಿಗೆ ಮದುವೆಗೆ ಹೆಣ್ಣು ಸಿಗುತ್ತಿಲ್ಲ. ರೈತರನ್ನು ಮದುವೆಯಾಗುವ ಯುವತಿಯರಿಗೆ 10 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಸೇರಿದಂತೆ ವಿಶೇಷ ಪ್ಯಾಕೇಜ್ ಅನ್ನು ಸರ್ಕಾರ ಘೋಷಿಸಬೇಕು ಎಂದು ಪ್ರತಿಷ್ಠಾನದ ಅಧ್ಯಕ್ಷ ಕೆ.ಜಿ. ಕುಮಾರ ಒತ್ತಾಯಿಸಿದ್ದಾರೆ.